
ಬೆಂಗಳೂರು, ಫೆಬ್ರವರಿ 27: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ(Heat Wave) ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬರಲಿದೆ.
ಚಾಮರಾಜನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇತ್ತು, ಬೀದರ್, ವಿಜಯಪುರ, ಗದಗ, ಹಾವೇರಿ, ರಾಯಚೂರು, ಧಾರವಾಡ, ದಕ್ಷಿಣ ಒಳನಾಡಿನ ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಕಳೆದ 24 ಗಂಟೆಗಳಲ್ಲಿ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ -2.6 ರಷ್ಟು ಕುಸಿತವಾಗಿದೆ.
ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್, ರಾಯಚೂರು, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ, ಹಾಸನ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ 31-33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಇನ್ನು ಬೆಂಗಳೂರಿನಲ್ಲಿ ಬೆಳಗಿನ ಜಾವ ತಂಪಾದ ಗಾಳಿ ಬೀಸುತ್ತಿತ್ತು, ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದೆ.
ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.