Home ಮನರಂಜನೆ ಕಿಚ್ಚ ಸುದೀಪ್ ಬಿಗ್ ಬಾಸ್ ಗೆ‌ ವಿದಾಯ!

ಕಿಚ್ಚ ಸುದೀಪ್ ಬಿಗ್ ಬಾಸ್ ಗೆ‌ ವಿದಾಯ!

0
ಕಿಚ್ಚ ಸುದೀಪ್  ಬಿಗ್ ಬಾಸ್ ಗೆ‌ ವಿದಾಯ!

ಶೋ ‘ಬಿಗ್‌ ಬಾಸ್‌’ ನಿರೂಪಣೆಗೆ ಕಿಚ್ಚ ಸುದೀಪ್‌ ಗುಡ್‌ ಬೈ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ‘ಇದು ನನ್ನ ಕೊನೆಯ ಸೀಸನ್‌’ ಎಂದು ಕಿಚ್ಚ ಪೋಸ್ಟ್‌ ಮಾಡುವ ಮೂಲಕ ಬಿಗ್‌ ಬಾಸ್‌ ನಿರೂಪಣೆಗೆ ಗುಡ್‌ ಬೈ ಹೇಳಿದ್ದಾರೆ. ಕಿಚ್ಚ ಸುದೀಪ್ ಅವರು ಈ ನಿರ್ಧಾರ ಅವರ ಅಭಿಮಾನಿಗಳಲ್ಲಿ ಅಸಮಾಧಾನ ಹುಟ್ಟು ಹಾಕಿದೆ.

ಕಿಚ್ಚನ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?

ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು…, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ….ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ… ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ.

ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ… ಎಂದು ಕಿಚ್ಚ ಸುದೀಪ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.ಇತ್ತೀಚೆಗೆ ಸುದೀಪ್ ಅವರು ಸೀಸನ್ 11 ರಲ್ಲಿ ಭಾಗಿಯಾಗೋದಿಲ್ಲ ಅನ್ನೋ ಗುಲ್ಲು ಎದ್ದಿತ್ತು.‌ ಆದರೆ ವಾಹಿನಿಯ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಕಿಚ್ಚ ಸುದೀಪ್ ಈ ಬಾರಿ ಒಪ್ಪಿಗೆ ನೀಡಿದ್ದರು. ಈಗ ಮುಂದಿನ ಸೀಸನ್ ನಡೆಸಿಕೊಡಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here