spot_img
Monday, January 13, 2025
spot_imgspot_imgspot_imgspot_img
spot_img

Top 5 This Week

spot_img

Related Posts

ಗುತ್ತಿಗೆದಾರ ಸಚಿನ್ Suicide Case! ಖರ್ಗೆ ಆಪ್ತ ಸೇರಿ ಐವರು Arrest!

ಬೀದರ್, ಜನವರಿ 10: ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಶುಕ್ರವಾರ ಬಂಧಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು.ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಗೆ ವಿಚಾರಣೆಗೆ ಬರುವಂತೆ ಸಿಐಡಿ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್​ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಸೂಕ್ತವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles