Home ಬ್ರೇಕಿಂಗ್ ನ್ಯೂಸ್ ಚನ್ನಮ್ಮನ ಕಿತ್ತೂರು: ವಿದ್ಯುತ್ ವ್ಯತ್ಯಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೊಂದರೆ

ಚನ್ನಮ್ಮನ ಕಿತ್ತೂರು: ವಿದ್ಯುತ್ ವ್ಯತ್ಯಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೊಂದರೆ

0

ಚನ್ನಮ್ಮನ ಕಿತ್ತೂರು: ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು ಈ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯಗಳು ವಿದ್ಯಾರ್ಥಿಗಳ ತಯಾರಿಗೆ ಅಡಚಣೆ ಉಂಟುಮಾಡುತ್ತಿದೆ ಇದರಿಂದ ಪಾಲಕರು ಆತಂಕಗೊಂಡಿದ್ದಾರೆ.

ವಿದ್ಯುತ್ ವ್ಯತ್ಯಯಗಳಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟಾಗುತ್ತಿದ್ದು, ಪರೀಕ್ಷೆಗೆ ಮುನ್ನದ ದಿನವೇ ವಿದ್ಯುತ್ ಕಡಿತದ ಸಮಸ್ಯೆ ಎದುರಾದರೆ ವಿದ್ಯಾರ್ಥಿಗಳಿಗ ತೊಂದರೆಯಾಗಲಿದೆ. ಈ ಕುರಿತು ಕೆಲವರು ಸ್ಥಳೀಯ ಅಧಿಕಾರಿಗಳಿಗೆ ಕರೆಯ ಮೂಲಕ ಗಮನ ಸೆಳೆದಿದ್ದು, ಪರೀಕ್ಷೆಗಳ ಸಮಯದಲ್ಲಿ ವಿದ್ಯುತ್ ಸರಬರಾಜು ಖಚಿತಪಡಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here