spot_img
Monday, December 23, 2024
spot_imgspot_imgspot_imgspot_img
spot_img

Top 5 This Week

spot_img

Related Posts

ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಪ್ಲಾನ್! ಕಾಂಗ್ರೆಸ್ ಶಾಸಕರೇ ಮಲ್ಲಿಕಾರ್ಜುನ ವಿರುದ್ಧ ಬಂಡಾಯ; ದಾವಣಗೆರೆ ಕಾಂಗ್ರೆಸ್ನಲ್ಲಿ ಸಂಚಲನ!

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳಗಳು ಹೊಸವೇನಲ್ಲ, ಇದಕ್ಕೆ ಹೊಸ ಸೇರ್ಪಡೆ ಎಂದರೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ವಿರುದ್ಧ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ ತೀವ್ರ ಅಸಮಾಧಾನ ಹೊರಹಾಕಿರುವುದು.

ಬಸವರಾಜು ಹೇಳುವ ಪ್ರಕಾರ ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ, ಚನ್ನಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ವಿರುದ್ಧ ಮಲ್ಲಿಕಾರ್ಜುನ ಅವರು ಮತ್ಯಾರನ್ನೋ ಗೆಲ್ಲಿಸಿದರು ಮತ್ತು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷನನ್ನು ಮುಂದುವರರಿಸುವಂತೆ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡನನ್ನು ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂದು ಬಸವರಾಜು ಹೇಳುತ್ತಾರೆ.

ಒಟ್ಟಿನಲ್ಲಿ ತಮ್ಮದೇ ಪಕ್ಷದ ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸ್ಬೇಕು ಅಂತ ಕಾಂಗ್ರೆಸ್ ಶಾಸಕರೇ ಗಂಟು ಬಿದ್ದಿದ್ದು, ದಾವಣಗೆರೆ ರಾಜಕೀಯದಲ್ಲಿ ಇನ್ಯಾವ ಸಂಚಲನ ಮೂಡಿಸಲಿದೆಯೇ ಅಂತ ಕಾದು ನೋಡಬೇಕಿದೆ.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles