
ಬೆಳಗಾವಿ, ನವೆಂಬರ್ 28: ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು 500 ಮೀ. ಸುತ್ತಳತೆಯಲ್ಲಿ ಡಿ.1 ರಿಂದ 30 ವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ.
ಸುವರ್ಣ ವಿಧಾನ ಸೌಧದದಲ್ಲಿ ಡಿ.9 ರಿಂದ 20 ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಅಧಿವೇಶನ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು 500 ಮೀ. ಸುತ್ತಳತೆಯಲ್ಲಿ ಡಿ.1 ರಿಂದ 30 ವರೆಗೆ ನಿಷೇದಾಜ್ಞೆ ಹೊರಡಿಸಿ ನಗರದ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ, ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು ಆದೇಶಿಸಿದ್ದಾರೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.