Home ಕರ್ನಾಟಕ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

0
ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!

ಬೆಂಗಳೂರು, ನವೆಂಬರ್ 03: ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಅಪಾರ್ಟ್‌ಮೆಂಟ್‌ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನೂ ನವೆಂಬರ್‌ 2ರಂದು ಗುರುಪ್ರಸಾದ್‌ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್‌ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.

LEAVE A REPLY

Please enter your comment!
Please enter your name here