ನವದೆಹಲಿ, ಜನವರಿ 11: ಈ ಬಾರಿ ದೆಹಲಿ ಚುನಾವಣೆಯಲ್ಲಿ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಆಮ್ ಆದ್ಮಿ ಪಕ್ಷ ಮೊದಲು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿತು. ನಂತರ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಕೂಡ ದೊಡ್ಡ ಘೋಷಣೆಗಳನ್ನು ಮಾಡಲು ಪ್ರಾರಂಭಿಸಿದೆ. ಇಂದು ಕಾಂಗ್ರೆಸ್ ಪಕ್ಷವು ದೆಹಲಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ 8500 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಇದಕ್ಕೂ ಮುಂಚೆಯೇ, ಕಾಂಗ್ರೆಸ್ ಪಕ್ಷವು ದೆಹಲಿಯ ಜನರಿಗೆ ಅನೇಕ ಚುನಾವಣಾ ಭರವಸೆಗಳನ್ನು ನೀಡಿದೆ
.ಯುವಕರು ತರಬೇತಿ ಪಡೆದ ಕ್ಷೇತ್ರಗಳಲ್ಲಿ ಅವರನ್ನು ನಿಯೋಜಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಅವರು… ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಬಹುದು. ಜನವರಿ 6ರಂದು ಕಾಂಗ್ರೆಸ್ ‘ಪ್ಯಾರಿ ದೀದಿ ಯೋಜನೆ’ಯನ್ನು ಘೋಷಿಸಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂ.ಗಳ ಆರ್ಥಿಕ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿತು.
ಜನವರಿ 8ರಂದು ಪಕ್ಷವು ‘ಜೀವನ ರಕ್ಷಾ ಯೋಜನೆ’ಯನ್ನು ಘೋಷಿಸಿತು. ಇದರಲ್ಲಿ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ದೆಹಲಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇದುವರೆಗೆ 49 ಅಭ್ಯರ್ಥಿಗಳನ್ನು ಘೋಷಿಸಿದೆ.