ಬೆಂಗಳೂರು, ಮಾರ್ಚ್ 07: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .
ಈ ವರ್ಷದ ಆಯವ್ಯಯದಲ್ಲಿ ಪ್ರಮುಖವಾಗಿ ಆರು8 ಅಭಿವೃದ್ಧಿಯ ಆಯಾಮಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ: ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಪರಸ್ಪರ ಪೂರಕವಾಗಿ ದುಡಿಯುವ ಕ್ಷೇತ್ರಗಳು, ಇವುಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡಲಿದೆ ಎಂದರು.