
ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿ (Belagavi) ಸಜ್ಜಾಗಿದೆ. ಗಾಂಧಿ, ಅಂಬೇಡ್ಕರ್ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ (Congress) ಸಜ್ಜಾಗಿದೆ.
ರಾಜಕೀಯ ಮತ್ತು ಸಂವಿಧಾನ ರಕ್ಷಣೆ ವಿಷಯವಾಗಿ ದೇಶಕ್ಕೆ ಹೊಸ ಸಂದೇಶ ನೀಡಲು ಇಲ್ಲಿ ಮಂಗಳವಾರ (ಜ.21) ಅಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.
ಬೆಳಗಾವಿಯ ಸಿಪಿಇಡಿ ಮೈದಾನವು ‘ಜೈ ಬಾಪು ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ಸಿದ್ಧವಾಗಿದೆ.
ಸುವರ್ಣ ವಿಧಾನಸೌಧ ಆವರಣದಲ್ಲಿ ಈಗಾಗಲೇ ಮಹಾತ್ಮ ಗಾಂಧಿ ಪುತ್ಥಳಿಯನ್ನು ಸಿದ್ದರಾಮಯ್ಯ, ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸೇರಿ ಹಲವಾರು ಕಾಂಗ್ರೆಸ್ ನಾಯಕರು ಅನಾವರಣಗೊಳಿಸಿದ್ದಾರೆ.