
ಬೆಳಗಾವಿ, ಜನವರಿ 10: ಬೆಳಗಾವಿಯಲ್ಲಿ (Belagavi) ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಬೆಳಗಾವಿ ತಾಲೂಕಿನ ಗಣೇಶಪುರದ ಹೊರವಲಯದಲ್ಲಿ ಅಪರಿಚಿತರು ರೌಡಿಶೀಟರ್ ಪ್ರಫುಲ್ ಪಾಟೀಲ್ ಮೇಲೆ ಫೈರಿಂಗ್ (Firing) ಮಾಡಿ ಹತ್ಯೆಗೆ ಯತ್ನಿಸಿದ್ದಾರೆ.
ರೌಡಿಶೀಟರ್ ಪ್ರಫುಲ್ ಪಾಟೀಲ್ ಬೆಳಗುಂದಿ ಗ್ರಾಮದಿಂದ ಮನೆಗೆ ಹೋಗುವಾಗ ಅಪರಿಚಿತರು ಚಲಿಸುವ ಕಾರಿನ ಮೇಲೆಯೇ ಫೈರಿಂಗ್ ಮಾಡಿದ್ದಾರೆ. ಇದರಿಂದ, ಗುಂಡು ಗಾಜಿಗೆ ತಗುಲಿದ್ದರಿಂದ ರೌಡಿಶೀಟರ್ ಪ್ರಫುಲ್ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಾರಿನ ಗಾಜುಗಳು ಚೂರುಗಳು ಚುಚ್ಚಿ ಪ್ರಫುಲ್ ಮುಖ ಮತ್ತು ತಲೆಭಾಗಕ್ಕೆ ಗಾಯವಾಗಿದೆ. ರೌಡಿಶೀಟರ್ ಪ್ರಫುಲ್ ಪಾಟೀಲ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಸ್ಪತ್ರೆಗೆ ಗ್ರಾಮೀಣ ಠಾಣೆ ಎಸಿಪಿ ಗಂಗಾಧರ್, ಪಿಐ ಮತ್ತು ಅವರ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದೆ.