ಸ್ಯಾಂಡಲ್‌ವುಡ್‌ನ ಮತ್ತೊಬ್ಬ ನಟ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಡಾಲಿ ಧನಂಜಯ್ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚುವುದರಲ್ಲಿ ಬ್ಯುಸಿಯಾಗಿದ್ದಾರೆ.
ಈಗಾಗಲೇ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಹಾಗೂ ಮಠಾಧೀಶರಿಗೆ ಆಹ್ವಾನವನ್ನು ಕೊಡುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಭಾವಿ ಪತ್ನಿಯನ್ನು ಮಾಧ್ಯಮಗಳಿಗೆ ಪರಿಚಯಿಸಿದ್ದಾರೆ. ಅವರೊಂದಿಗೆ ತಮ್ಮ ಲವ್ ಸ್ಟೋರಿ, ಮದುವೆ ಸಿದ್ಧತೆ, ಮುಂದಿನ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಮದುವೆ ಆಗಮಿಸಿ, ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ತನ್ನ ಭಾವಿ ಪತ್ನಿಯ ಬಗ್ಗೆ ಮುದ್ದಾದ ಮಾತುಗಳನ್ನು ಆಡಿದ್ದಾರೆ