ಬೆಂಗಳೂರು, ಜನವರಿ 17: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಪಿಎಂಎಲ್ಎ ಕಾಯ್ದೆ ಅಡಿ ಸ್ಥಿರಾಸ್ತಿಗಳ ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮೂಲಕ ಖಚಿತ ಪಡಿಸಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅವರ ದೂರಿನನ್ವಯ ತನಿಖೆ ನಡೆಸಿದ್ದ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.