spot_img
Monday, February 24, 2025
spot_imgspot_imgspot_imgspot_img
spot_img

Top 5 This Week

spot_img

Related Posts

ಮುಡಾ ಹಗರಣದಲ್ಲಿ CM Siddaramaiah ಸೇರಿ ಇತರರಿಗೆ ಕ್ಲೀನ್ ಚಿಟ್! ತನಿಖೆಗೆ ಕೇಸ್ ಅನರ್ಹ ಎಂದ ಲೋಕಾಯುಕ್ತ!

ಮೈಸೂರು, ಫೆ19: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣದ (MUDA Scam) ಲೋಕಾಯುಕ್ತ ತನಿಖೆ (Lokayukta investigation) ಕೊನೆಯ ಹಂತ ತಲುಪಿದೆ.

ಇದೀಗ ತನಿಖೆ ಬಳಿಕ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಪತ್ನಿ ಪಾವರ್ತಿ, ಬಾಮೈದ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜುಗೆ ಕ್ಲೀನ್‌ಚಿಟ್‌ ನೀಡಲಾಗಿದೆ.

ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಿದ್ದು, ಎಲ್ಲ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ.

ಲೋಕಾಯುಕ್ತ ಎಸ್ಪಿ ಉದೇಶ್‌ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್‌ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರಿನ ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ.

ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles