spot_img
Thursday, April 17, 2025
spot_imgspot_imgspot_imgspot_img
spot_img

Top 5 This Week

spot_img

Related Posts

ಮೋದಗಾ ಗ್ರಾಮದಲ್ಲಿ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿ; ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ!

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ನಿಮಿತ್ಯವಾಗಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಇಂದು ವಿಧಾನ ಪರಿಷತ್ ಸದಸ್ಯರಾದ @channarajhattiholi ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ವಿಶೇಷ ಕಾಳಜಿಯಡಿ ಸುಮಾರು ಮೂರೂವರೆ ಕೋಟಿ (3.50 Cr) ರೂ,ಗಳ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರವನ್ನು ಕೊಡುವುದಾಗಿ ಭರವಸೆ ನೀಡಲಾಗಿದೆ‌.

ಜಾತ್ರೆ ಸನಿಹದಲ್ಲಿದ್ದು, ಸಾರ್ವಜನಿಕರಿಗೆ ಹಾಗೂ ಅವರ ಆಸ್ತಿ-ಪಾಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.ಈ ವೇಳೆ ಗ್ರಾಮದ ಹಿರಿಯರು ಹಾಗೂ ಪಿಕೆಪಿಎಸ್ ನ ಅಧ್ಯಕ್ಷರಾದ ಗಂಗಣ್ಣ ಕಲ್ಲೂರ, ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ ಕಮೀಟಿಯವರು, ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಗ್ರಾಮದ ನಾಗರಿಕರು, ಸುಳೇಭಾವಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles