spot_img
Thursday, April 17, 2025
spot_imgspot_imgspot_imgspot_img
spot_img

Top 5 This Week

spot_img

Related Posts

‘ರೈತರಿಗೆ ನೀಡಿದ ನೋಟಿಸ್ ವಾಪಸ್’ ವಕ್ಫ್ ಅಧಿಕಾರಿಗಳ ಜೊತೆ ಸಿಎಂ ಸಭೆ; ಅಧಿಕಾರಿಗಳಿಗೆ ಸೂಚನೆ!

ಬೆಂಗಳೂರು, ನವೆಂಬರ್ 02: ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು.

ಈ ವೇಳೆ ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles