ಕೊಪ್ಪಳ, ಡಿಸೆಂಬರ್. 22: ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.
ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ನುಂಗಿದ ಅಧಿಕಾರಿ ದಸ್ತಗಿರ್ ಅಲಿಗೆ ವಾಂತಿ ಮಾಡಿಸಿ ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿದ್ದಾರೆ.
ಎನ್ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು
ಶನಿವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ದಸ್ತಗಿರ್ ಅಲಿಯನ್ನು ಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ