ಬೆಳಗಾವಿ, ಫೆ23 ಮುಸುರೆ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದು ಹಲ್ಲೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ಮುಸುರೆ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಳಿಕೊಪ್ಪ ಗ್ರಾಮದ ರಾಕೇಶ ಜಾಧವ್ ಎಂಬಾತ ರಾಕೇಶ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ಜಾಗೆಯಲ್ಲಿ ಯಾಕೆ ಮುಸುರಿ ಚೆಲ್ಲುತ್ತೀಯಾ ಎಂಬ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ.
ಗಲಾಟೆ ವಿಕೋಪಕ್ಕೆ ತಿರುಗಿ ನಾಲ್ವರು ಯುವಕರಿಂದ ರಾಕೇಶ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮದಲ್ಲಿ ಗಲಾಟೆ ಆಗ್ತಿದ್ದಂತೆ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು,ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಡಿಸಿಪಿ ರೋಹನ್ ಜಗದೀಶ್ ಅವರು ವಿಚಾರಿಸಿ, ಬಳಿಕ ಕೋಳಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಿರೇಬಾಗೆವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.