Home ಕರ್ನಾಟಕ ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಆರೋಪಿ ಶಿಕ್ಷಕ ಬಂಧನ! ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಆರೋಪಿ ಶಿಕ್ಷಕ ಬಂಧನ! ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್!

0
ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್  ಅತ್ಯಾಚಾರ; ಆರೋಪಿ ಶಿಕ್ಷಕ ಬಂಧನ! ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕಲಬುರಗಿ, ಡಿಸೆಂಬರ್04: ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರನನ್ನು ಮಂಗಳವಾರ ಯಡ್ರಾಮಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಸಂಜೆ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಮಂಗಳವಾರ ಸಂಪೂರ್ಣ ಬಂದ್ ಆಚರಿಸಲಾಯಿತು.

ಹಾಜಿಮಲಂಗ ಅವರು ಶಾಲಾ ತರಗತಿಗಳು ಮುಗಿದ ಬಳಿಕ ಟ್ಯೂಷನ್ ಕ್ಲಾಸ್‌ ಮಾಡುವುದಾಗಿ ಕೆಲವು ಮಕ್ಕಳನ್ನು ರಾತ್ರಿ ಶಾಲೆಯಲ್ಲಿ ಉಳಿಸಿಕೊಳ್ಳುತ್ತಿದ್ದರು. ಕ್ಲಾಸ್ ತೆಗೆದುಕೊಂಡು ಬೆಳಿಗ್ಗೆ ಅವರನ್ನು ಮನೆಗೆ ಕಳುಹಿಸುತ್ತಿದ್ದರು. ಮೇ ತಿಂಗಳಲ್ಲಿ 11 ವರ್ಷದ ಬಾಲಕಿಗೆ ರಕ್ತಸ್ರಾವವಾಗಿತ್ತು. ಮಗಳು ದೊಡ್ಡವಳು (ಮುಟ್ಟಿನ) ಆಗಿರಬಹುದೆಂದು ಪೋಷಕರು ಸುಮ್ಮನಿದ್ದು ಎಂದಿನಂತೆ ಶಾಲೆಗೆ ಕಳುಹಿಸಿದ್ದರು. ಅಂದಿನ ರಕ್ತಸ್ರಾವ ಅತ್ಯಾಚಾರದಿಂದ ಆಗಿತ್ತು ಎಂಬುದು ಅವರಿಗೆ ತಡವಾಗಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿದ್ದ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಯಡ್ರಾಮಿಗೆ ಧಾವಿಸಿ ಸಂತ್ರಸ್ತರಿಗೆ 2.5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು. ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಯಡ್ರಾಮಿ ತಹಶೀಲ್ದಾರ್ ಶಶಿಕಲಾ ಪಡಗಟ್ಟಿ ಮತ್ತಿತರ ಅಧಿಕಾರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರ ಸೂಚನೆಯಂತೆ ಶಾಲೆಗೆ ನೀಡಿರುವ ಅನುಮತಿಯನ್ನು ಶೀಘ್ರದಲ್ಲಿಯೇ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೂರ್ಯಕಾಂತ್ ಮದನಿದಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here