spot_img
Monday, January 13, 2025
spot_imgspot_imgspot_imgspot_img
spot_img

Top 5 This Week

spot_img

Related Posts

ಶರಣಾದ ನಕ್ಸಲರು Judicial Custodyಗೆ! 6 ಮಂದಿಯೂ ಪರಪಪ್ಪನ ಅಗ್ರಹಾರಕ್ಕೆ Shift!

ಬೆಂಗಳೂರು, ಜನವರಿ 09: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಮುಂದೆ ಆರು ನಕ್ಸಲೀಯರು ಶರಣಾಗಿದ್ದರು. ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ಎನ್‌ಐಎ ವಿಶೇಷ ಕೋರ್ಟ್‌ ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಹೀಗಾಗಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.ನಿನ್ನೆ ಆರು ಮಂದಿ ನಕ್ಸಲೀಯರು ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಶರಣಾದರು. ಇದರ ಸಂಕೇತವಾಗಿ ಮುಂಡಗಾರು ಲತಾ ನಕ್ಸಲ್ ಸಮವಸ್ತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು.

ಬಳಿಕ ಸಿದ್ದರಾಮಯ್ಯ ಸಂವಿಧಾನದ ಪ್ರತಿ ಹಾಗೂ ಹೂಗಳನ್ನು ಅವರಿಗೆ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಮಾಡಿಕೊಂಡಿದ್ದರು. ನಂತರ ನಕ್ಸಲ್ ನಾಯಕರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles