spot_img
Monday, December 23, 2024
spot_imgspot_imgspot_imgspot_img
spot_img

Top 5 This Week

spot_img

Related Posts

ಶಾ ವಿರುದ್ಧ ಹಕ್ಕುಚ್ಯುತಿ ಮಂಡನೆ! ಅಂಬೇಡ್ಕರ್ ಕುರಿತು ವಿವಾದತ್ಮಕ ಹೇಳಿಕೆ; ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು!

ನವದೆಹಲಿ, ಡಿಸೆಂಬರ್ 19 : ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಇದೀಗ ರಾಜಕೀಯ ಕಾವು ಪಡೆದುಕೊಂಡಿದ್ದು. ಕಾಂಗ್ರೆಸ್ ನಂತರ ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಕೆರಳಿದೆ. ಅಂಬೇಡ್ಕರ್ ಕುರಿತು ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚುತ್ಯಿ ನೋಟಿಸ್ ನೀಡಿದೆ.

ಮೂಲಗಳ ಪ್ರಕಾರ, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ರಾಜ್ಯಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ಶಾ ವಿರುದ್ಧ ವಿಶೇಷಾಧಿಕಾರ ಉಲ್ಲಂಘನೆಯ ನೋಟಿಸ್ ಅನ್ನು ಸಲ್ಲಿಸಿದ್ದಾರೆ.

ವಾಸ್ತವವಾಗಿ, ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ‘ಅದು ಈಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇಷ್ಟು ದೇವರ ನಾಮಸ್ಮರಣೆ ಮಾಡಿದ್ದರೆ ಏಳೇಳು ಜನ್ಮ ಸ್ವರ್ಗಕ್ಕೆ ಹೋಗುತ್ತಿದ್ದೆ. ಅಂಬೇಡ್ಕರ್ ಅವರ ಹೆಸರನ್ನು ನೂರು ಬಾರಿ ತೆಗೆದುಕೊಳ್ಳಿ, ಆದರೆ ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಏನು ಅನಿಸುತ್ತದೆ ಎಂಬುದನ್ನು ನಾನು ಹೇಳುತ್ತೇನೆ ಎಂದು ಹೇಳಿದ್ದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles