Home ಅಂತರರಾಷ್ಟ್ರೀಯ ಅಂತರಾಷ್ಟ್ರೀಯ ಸಂಡೂರು ವಿಧಾನಸಭೆ ಉಪಚುನಾವಣೆ; ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆಪ್ರಚಾರ, ಇತರೆ ಕಾರ್ಯಗಳಿಗೆ ಅನುಮತಿ ಕಡ್ಡಾಯ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಸಂಡೂರು ವಿಧಾನಸಭೆ ಉಪಚುನಾವಣೆ; ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆಪ್ರಚಾರ, ಇತರೆ ಕಾರ್ಯಗಳಿಗೆ ಅನುಮತಿ ಕಡ್ಡಾಯ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

0

ಬಳ್ಳಾರಿ: ಸಂಡೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ರ‍್ಯಾಲಿ ನಡೆಸಲು, ಕಟ್ಟಡ ಬಳಕೆ, ವಾಹನ ಹಾಗೂ ಇನ್ನಿತರೆ ನಿಯಮಗಳಿಗೆ ಸುವಿಧಾ ತಂತ್ರಾಂಶ ಮೂಲಕ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಸಂಡೂರು ವಿಧಾನಸಭೆ ಉಪಚುನಾವಣೆ ಸಂಬಂಧ ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ರಾಜಕೀಯ ಪಕ್ಷಗಳು ತಪ್ಪದೇ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು ಎಂದು ಅವರು ಸೂಚನೆ ನೀಡಿದರು.ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಚಿನ್ಹೆಯ ವಾಹನ, ಫ್ಲೆಕ್ಸ್ ಹಾಗೂ ಇನ್ನಿತರೆ ರಾಜಕೀಯ ಸಂಬಂಧ ಬ್ಯಾನರ್‌ಗಳಿದ್ದಲ್ಲಿ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು, ಈ ಕುರಿತು ತಮ್ಮ ಪಕ್ಷದ ಮುಖಂಡರುಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಬೇಕು ಎಂದರು.ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವುದರಿಂದ ರಾಜಕೀಯ ಪಕ್ಷದವರು ಯಾವುದೇ ರ‍್ಯಾಲಿ, ರಾಜಕೀಯ ಪಕ್ಷಗಳ ಸಭೆ ಸಮಾರಂಭ ಆಯೋಜಿಸುವುದಕ್ಕೆ ಅನುಮತಿ ಪಡೆಯಬೇಕು. ಇನ್ನುಳಿದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಸಭೆ-ಸಮಾರಂಭ ಆಯೋಜಿಸಲು ಅಡ್ಡಿಯಿಲ್ಲ. ಮುಖ್ಯವಾಗಿ ಇಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆಯ ಕಾರ್ಯಚಟುವಟಿಕೆ ಕುರಿತಂತೆ ಯಾವುದೇ ರೀತಿಯ ಪ್ರಚಾರ ಮಾಡುವಂತಿಲ್ಲ ಎಂದು ಅವರು ತಿಳಿಸಿದರು.ಸಂಡೂರು ಭಾಗದಲ್ಲಿ ಸಾಕಷ್ಟು ಕಾರ್ಖಾನೆ ಪ್ರದೇಶಗಳಿದ್ದು, ಮತದಾನ ಪ್ರಕ್ರಿಯೆಯಿಂದ ದೂರ ಉಳಿಯದಂತೆ ಪ್ರತಿಯೊಬ್ಬರಿಗೂ ಮತ ಚಲಾಯಿಸುವಂತೆ ಪ್ರೇರೇಪಿಸುವ ಕರ್ತವ್ಯ ಜಿಲ್ಲಾಡಳಿತ ನಿರ್ವಹಿಸುತ್ತದೆ. ಅದರಂತೆ ಪಕ್ಷದವರು ಮತ ಯಾಚಿಸಲು ಚುನಾವಣೆ ಆಯೋಗದ ನಿರ್ದೇಶನದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಡಿಸಿಯವರು ಮನವರಿಕೆ ಮಾಡಿದರು.ಸಂಡೂರು ವಿಧಾನಸಭೆ ಉಪಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕು ಎಂದು ಕೋರಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಮಾತನಾಡಿ, ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷದ ಮುಖಂಡರುಗಳು ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು. ಕಳೆದ ಬಾರಿ ಚುನಾವಣೆಯಂತೆ ಪಾರದರ್ಶಕವಾಗಿ ನಡೆಸಲು ಕೈಜೋಡಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here