spot_img
Monday, December 23, 2024
spot_imgspot_imgspot_imgspot_img
spot_img

Top 5 This Week

spot_img

Related Posts

ಸರಕಾರಿ ನೌಕರರ ತುಟ್ಟಿ ಭತ್ಯೆ 2.25% ಏರಿಕೆ! ರಾಜ್ಯ ನೌಕರರಿಗೆ ಸರ್ಕಾರ ವರ್ಷದ ಕೊನೆಗೆ ಕೊಡುಗೆ!

ಬೆಂಗಳೂರು, ನವೆಂಬರ್ 28: ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 2.25ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯ ಮೇರೆಗೆ ತುಟ್ಟಿಭತ್ಯೆ ಏರಿಕೆ ಮಾಡಲಾಗಿದೆ.

7ನೇ ವೇತನ ಆಯೋಗ ಜಾರಿಯಾದ ಬಳಿಕ ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಮೂಲವೇತನದ ಶೇ 8.50ರಷ್ಟು ನಿಗದಿಪಡಿಸಲಾಗಿತ್ತು. ಸರಕಾರ ಈಗ ಶೇ 2.25ರಷ್ಟು ಏರಿಕೆ ಮಾಡಿದ್ದರಿಂದ ಸರಕಾರಿ ಸಿಬ್ಬಂದಿಯ ಡಿಎ ಶೇ 10.75ಕ್ಕೆ ಹೆಚ್ಚಳವಾದಂತಾಗಿದೆ.

ಜುಲೈನಿಂದಲೇ ಜಾರಿ: 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ ಶೇ 8.50ರಿಂದ ಶೇ 10.75ಕ್ಕೆ ಪರಿಷ್ಕರಿಸಿ ಹೆಚ್ಚಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾಮಾನ್ಯವಾಗಿ, ಕೇಂದ್ರ ಸರಕಾರ ತನ್ನ ಸಿಬ್ಬಂದಿಗೆ ಡಿಎ ಹೆಚ್ಚಳ ಮಾಡಿದ ಪ್ರಮಾಣದಲ್ಲಿಯೇ ರಾಜ್ಯ ಸರಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡುತ್ತಿತ್ತು. ಆದರೆ ಆಗಸ್ಟ್ ಒಂದರಿಂದ ಜಾರಿಗೆ ಬರುವಂತೆ ಏಳನೇ ವೇತನ ಆಯೋಗದ ವರದಿ ಅನುಷ್ಟಾನಕ್ಕೆ ತಂದು ಸರಕಾರಿ ನೌಕರರ ವೇತನ ಹೆಚ್ಚಳ ಮಾಡಿದ್ದರಿಂದ ಡಿಎ ಪರಿಷ್ಕರಣೆಯಲ್ಲಿ ಕೇಂದ್ರ ಸರಕಾರಕ್ಕಿಂತ ಸ್ವಲ್ಪ ಕಡಿಮೆ ಹೆಚ್ಚಳ ಮಾಡಲಾಗಿದೆ.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles