ಬಾಗಲಕೋಟೆ, ಡಿಸೆಂಬರ್ 22: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸರು ಸಿಟಿ ರವಿ ಅವರನ್ನು ನಕಲಿ ಎನ್‌ಕೌಂಟರ್ ಮಾಡುವ ವಿಚಾರದಲ್ಲಿದ್ದರು ಎಂದು ಆರೋಪಿಸಿದ್ದಾರೆ.
ಬೆಳಗಾವಿ ಪೊಲೀಸ್ ಕಮಿಷನರ್ ವಿರುದ್ಧವೂ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ ಅವರ ಬಂಧನ ಮತ್ತು ಪೊಲೀಸರ ದುರ್ವರ್ತನೆಯನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಾಗಿದೆ.
ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು. ಕೆಲವು ಮಾಧ್ಯಮದವರು ಕೂಡ ಬೆನ್ನುಹತ್ತಿದ್ರು, ಧನ್ಯವಾದಗಳು ಎಂದಿದ್ದಾರೆ.