
ಬೆಂಗಳೂರು, ಮಾರ್ಚ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು. ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ. IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದರು.
ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.