ಬೆಳಗಾವಿ, ಜನವರಿ17: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದ ಹಲವು ಮುಖಂಡರು, ನಾಯಕರು, ಕಾರ್ಯಕರ್ತರು ಹೆಬ್ಬಾಳಕರ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರವರು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಇಂದು ಭೇಟಿ ನೀಡಿ, ರಸ್ತೆ ಅಪಘಾತದ ಕುರಿತು ಮಾಹಿತಿ ಪಡೆದು, ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಇದ್ದರು.