
ಬೆಂಗಳೂರು, ನವೆಂಬರ್ 23: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್‌ಗೆ ಹಿನ್ನಡೆಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ 6ನೇ ಸುತ್ತಿನ ಬಳಿಕ ನಿಖಿಲ್ ಕುಮಾರಸ್ವಾಮಿಗೆ 30,675 ಮತ ಹಾಗೂ ಯೋಗೇಶ್ವರ್‌ಗೆ 29,891 ಮತಗಳು ಸಿಕ್ಕಿವೆ. ಯೋಗೇಶ್ವರ್‌ಗೆ 783 ಮತಗಳ ಹಿನ್ನಡೆ ಎದುರಾಗಿದೆ.
3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನಡೆ ಸಾಧಿಸಿದ್ದಾರೆ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ
ಶಿಗ್ಗಾವಿಯಲ್ಲಿ 7ನೇ ಸುತ್ತು ಮುಕ್ತಾಯವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ: 38,607 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಯಾಸೀರ ಅಹಮದ್ ಖಾನ್ ಪಠಾಣ 37,609 ಮತಗಳನ್ನು ಪಡೆದಿದ್ದಾರೆ. ಬಿಜೆಪಿಗೆ 998 ಮತಗಳ ಮುನ್ನಡೆ ಲಭಿಸಿದೆ.
ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನಡೆ ಸಾಧಿಸಿದ್ದಾರೆ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.