Home ರಾಜಕೀಯ 7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ

7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ

0
7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ

ಮುಂಬೈ, ಅಕ್ಟೋಬರ್ 09: ಮಹಾರಾಷ್ಟ್ರದಲ್ಲಿ 7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಲಿದ್ದಾರೆ.

ನಾಗ್ಪುರದಲ್ಲಿ ಅಂದಾಜು 7,000 ಕೋಟಿ ರೂ. ವೆಚ್ಚದ ಡಾ ಬಾಬಾ ಸಾಹೇಬ್​​ ಅಂಬೇಡ್ಕರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಇದು ಉತ್ಪಾದನೆ, ವಾಯುಯಾನ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚಾಗಿ ಇದು ನಾಗ್ಪುರ ನಗರ ಮತ್ತು ವಿದರ್ಭ ಪ್ರದೇಶಕ್ಕೆ ಪ್ರಯೋಜನಕಾರಿಯಾಗಿದೆ.

ಶಿರಡಿ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಶಂಕುಸ್ಥಾಪನೆಯನ್ನೂ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. 645 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಇದು ಶಿರಡಿಗೆ ಬರುವ ಧಾರ್ಮಿಕ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲಿದೆ.

ಈ ಕಟ್ಟಡವನ್ನು ಸಾಯಿಬಾಬಾ ಅವರ ಅಧ್ಯಾತ್ಮಿಕ ಬೇವಿನ ಮರದ ವಿನ್ಯಾಸ ಆಧಾರಿಸಿ ನಿರ್ಮಾಣ ಮಾಡಲಾಗುವುದು.ಇದರ ಜೊತೆಗೆ ಎಲ್ಲರಿಗೂ ಆರೋಗ್ಯ ಸೇವೆ ಖಚಿತಪಡಿಸಿಕೊಳ್ಳಲು ಮುಂಬೈ, ನಾಸಿಕ್, ಜಲ್ನಾ, ಅಮರಾವತಿ, ಗಡ್ಚಿರೋಲಿ, ಬುಲ್ಧಾನಾ, ವಾಶಿಮ್, ಭಂಡಾರಾ, ಹಿಂಗೋಲಿ ಮತ್ತು ಅಂಬರನಾಥ್ (ಥಾಣೆ) ನಲ್ಲಿರುವ ಒಟ್ಟಯ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here