
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಳ್ಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.
ಚನ್ನಪಟ್ಟಣ-ಶಿಗ್ಗಾವಿಯಲ್ಲಿ ಎನ್’ಡಿಎ ಅಭ್ಯರ್ಥಿಗಳಾದ ಭರತ್ ಬೊಮ್ಮಾಯಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಅನ್ನಪೂರ್ಣ ತೂಕಾರಾಂ ಅವರು ಮುನ್ನಡೆ ಸಾಧಿಸಿದ್ದಾರೆ.
ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.ಭಾನುವಾರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ವೇಳೆ ಬಹಿರಂಗ ಸಭೆ, ಸಾರ್ವಜನಿಕ ಭಾಷಣ, ಸಂಭ್ರಮಾಚರಣೆ ಮಾಡದಂತೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ.