Home ಕರ್ನಾಟಕ ಮತ್ತೇ ‘ಕೈ’ ಭರಾಟೆ! ಮೂರೂ ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡ ‘ಕಾಂಗ್ರೆಸ್ ‘ ಬಿಜೆಪಿಗೆ ಭಾರೀ ಮುಖಭಂಗ!

ಮತ್ತೇ ‘ಕೈ’ ಭರಾಟೆ! ಮೂರೂ ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡ ‘ಕಾಂಗ್ರೆಸ್ ‘ ಬಿಜೆಪಿಗೆ ಭಾರೀ ಮುಖಭಂಗ!

0
ಮತ್ತೇ ‘ಕೈ’ ಭರಾಟೆ! ಮೂರೂ ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡ ‘ಕಾಂಗ್ರೆಸ್ ‘ ಬಿಜೆಪಿಗೆ ಭಾರೀ ಮುಖಭಂಗ!

ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮಧ್ಯೆ ನೇರ ಪೈಪೋಟಿ ಉಂಟಾಗಿತ್ತು. ಅಂತಿಮ ಸುತ್ತಿನ ಬಳಿಕ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರು 82229 ಮತ ಪಡೆದು ಸೋತರು. ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಅವರು 112642 ಮತಗಳನ್ನು ಗಳಿಸಿ, 25413 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ 13,448 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಜಯಿಸಿದ್ದಾರೆ.ಯಾಸೀರ್ ಖಾನ್ ಪಠಾಣ್ 1,00,756 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದ್ದರೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 87,308 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.

ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ‌ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಅವರು 9649 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ 93,616 ಮತ್ತು ಬಿಜೆಪಿ 83967 ಮತ ಪಡೆದಿದಿದ್ದು, ಅನ್ನಪೂರ್ಣ ತುಕಾರಾಂ 9649 ಮತಗಳ ಅಂತರದಿಂದ ಗೆದ್ದಿದ್ದಾರೆ.

LEAVE A REPLY

Please enter your comment!
Please enter your name here