spot_img
Monday, January 13, 2025
spot_imgspot_imgspot_imgspot_img
spot_img

Top 5 This Week

spot_img

Related Posts

‘ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎಗೆ ಸೇರಿಸಿಲ್ಲ’ ನಾಳೆ ಸರ್ವೋಚ್ಛ ನ್ಯಾಯಾಲಯ ಆದೇಶ ಪ್ರತಿ ಸದನಕ್ಕೆ; ಸಿದ್ದರಾಮಯ್ಯ ಗುಡುಗು

ಬೆಳಗಾವಿ: ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎಗೆ ಸೇರಿಸಿಲ್ಲ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದ್ದು, ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲೆಸೆದಿದ್ದಾರೆ.

2ಎ ಮೀಸಲಾತಿ ವಿಚಾರವಾಗಿ ಪಂಚಮಸಾಲಿ (Panchmasali) ಸಮುದಾಯ ನಾಳೆ ಸುವರ್ಣ ಸೌಧ ಮುತ್ತಿಗೆಗೆ ಸಜ್ಜಾಗಿದೆ. ಈ ವಿಚಾರವಾಗಿ ಇಂದು ಸದನದ ಒಳಗೂ ಮತ್ತು ಹೊರಗೂ ವ್ಯಾಪಕ ಗದ್ದಲವಾಗುತ್ತಿದ್ದು, ಇದೀಗ ಬಿಜೆಪಿ ನಾಯಕರ ವಾಗ್ದಾಳಿಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದು,​ ಈ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

‘ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ. ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ.

ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles