ಲಕ್ನೋ: ಟೀಂ ಇಂಡಿಯಾದ ಟಿ20 ಆಟಗಾರ ರಿಂಕು ಸಿಂಗ್ (Rinku Sigh) ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ (Priya Saroj) ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಶೀಘ್ರವೇ ಇಬ್ಬರ ಮದುವೆ (Marriage) ನಡೆಯಲಿದೆ ಎಂಬ ಸುದ್ದಿ ಈಗ ವೈರಲ್ ಆಗಿದೆ.
ಈ ಸುದ್ದಿಯ ಬಗ್ಗೆ ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಪ್ರತಿಕ್ರಿಯಿಸಿ, ರಿಂಕು ಅವರ ಕುಟುಂಬ ಮದುವೆ ಪ್ರಸ್ತಾಪ ಕಳುಹಿಸಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ತಿಳಿಸಿದರು.
ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಈ ಸುದ್ದಿಯ ಬಗ್ಗೆ ಇಲ್ಲಿಯವರೆಗೆ ರಿಂಕು ಸಿಂಗ್ ಆಗಲಿ ಸಂಸದೆ ಪ್ರಿಯಾ ಸರೋಜ್ ಖಚಿತಪಡಿಸಿಲ್ಲ. ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ (Team India) ಸದಸ್ಯರಾಗಿದ್ದ ರಿಂಕು ಮುಂದಿನ ವಾರದಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ.