ನವದೆಹಲಿ: ಕರ್ನಾಟಕ ರಾಜ್ಯದ ಜನರನ್ನು ಚುನಾವಣೆಯಲ್ಲಿ ಸೆಳೆಯುವುದಕ್ಕೆ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಿಂದ ಸಾವಿರಾರು ಕೋಟಿ ರೂ. ಹಣವನ್ನು ಗ್ಯಾರಂಟಿಗಾಗಿ ಖರ್ಚು ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಮ್ಮ ದೇಶದಲ್ಲಿ ವಿವಿಧ ರಾಜ್ಯದಲ್ಲಿ ಅಧಿಕಾರದಲ್ಲಿರುವ ವಿಪಕ್ಷಗಳು ಉಚಿತ ಗ್ಯಾರಂಟಿಗಳನ್ನು ನೀಡಿದ್ದರಿಂದ ಸಾವಿರಾರು ಕೋಟಿ ರೂ. ಸಾಲವನ್ನು ಮಾಡುತ್ತಿವೆ. ತಮ್ಮ ಬಜೆಟ್ ಬಗ್ಗೆ ನೋಡದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿವೆ ಎಂದು ಸೀತಾರಾಮನ್ ಟೀಕಿಸಿದ್ದಾರೆ.
ಇಂದಿನ ರಾಜ್ಯಗಳ ಬಜೆಟ್ನಲ್ಲಿ ಗ್ಯಾರಂಟಿಗಳನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹಿಮಾಚಲ ಪ್ರದೇಶ, ಕರ್ನಾಟಕ ಸೇರಿದಂತೆ ಉಚಿತ ಗ್ಯಾರಂಟಿ ಪೂರೈಸಲು ಹೋಗಿ ಸಾಲದ ಸುಳಿಗೆ ಸಿಲುಕುತ್ತಿವೆ ಎಂದಿದ್ದಾರೆ.
ಕೇಂದ್ರ ಸಚಿವೆಯ ಹೇಳಿಕೆಗೆ ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಣ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಆರ್ಥಿಕವಾಗಿ ಬಲಿಷ್ಟವಾಗಿದೆ. ಗ್ಯಾರಂಟಿ ಯೋಜನೆಯ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.