Home ಕರ್ನಾಟಕ ಪ್ರಸಕ್ತ Budget ನಲ್ಲಿ Guarantee Schemesಗೆ 51ಸಾವಿರ ಕೋಟಿ ಮೀಸಲು! ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ

ಪ್ರಸಕ್ತ Budget ನಲ್ಲಿ Guarantee Schemesಗೆ 51ಸಾವಿರ ಕೋಟಿ ಮೀಸಲು! ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ

0
ಪ್ರಸಕ್ತ Budget ನಲ್ಲಿ Guarantee Schemesಗೆ 51ಸಾವಿರ ಕೋಟಿ ಮೀಸಲು! ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್​ 07: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್​ನಲ್ಲಿ 51 ಸಾವಿರ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ಈ ವರ್ಷದ ಆಯವ್ಯಯದಲ್ಲಿ ಪ್ರಮುಖವಾಗಿ ಆರು8 ಅಭಿವೃದ್ಧಿಯ ಆಯಾಮಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಕಲ್ಯಾಣ ಕಾರ್ಯಕ್ರಮಗಳ ಆಯವ್ಯಯ: ಗ್ಯಾರಂಟಿ ಯೋಜನೆಗಳ ಜತೆಗೆ ಇರುವ ಇತರೆ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ. ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯುದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ.

 ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ: ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಪರಸ್ಪರ ಪೂರಕವಾಗಿ ದುಡಿಯುವ ಕ್ಷೇತ್ರಗಳು, ಇವುಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡಲಿದೆ ಎಂದರು.

LEAVE A REPLY

Please enter your comment!
Please enter your name here