
ಚನ್ನಮ್ಮನ ಕಿತ್ತೂರು, ಅಕ್ಟೋಬರ್ 03: ಡಿಸೆಂಬರ್ 20ರಿಂದ 22ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆ ಸೆಪ್ಟೆಂಬರ್ 22ರಿಂದ ಆರಂಭವಾಗಿ ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಂಚರಿಸಿ ಅಕ್ಟೋಬರ್ 03ರಂದು ಚನ್ನಮ್ಮನ ಕಿತ್ತೂರಿಗೆ ಆಗಮಿಸಿತು.
ಕಿತ್ತೂರಿನ ತಹಶೀಲದಾರ ರವೀಂದ್ರ ಹಾದಿಮನಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಾಯ್ ತುಬಾಕದ, ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ, ಪಟ್ಟಣ ಪಂಚಾಯತ ಅಧಿಕಾರಿ ಮಲ್ಲಯ್ಯ ಹಿರೇಮಠ, ಪಿ..ಡಬ್ಲು.ಡಿ. ಅಭಿಯಂತರ ಮಿರಜಕರ ಮತ್ತಿತರರು ಪೂಜೆ ಸಲ್ಲಿಸಿ ಕನ್ನಡ ರಥವನ್ನು ಬರಮಾಡಿಕೊಂಡರು.
ಮಹಿಳೆಯರು ಆರತಿ ಬೆಳಗಿ ಕುಂಭಮೇಳದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು , ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು,ಪತ್ರಕರ್ತರು ಶಿಸ್ತಿನಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.