Home ಕರ್ನಾಟಕ BOMB BLAST ಪ್ರಕರಣ: ಡ್ರೋನ್ ಪ್ರತಾಪ್‌ Arrest! ಪ್ರಕರಣದ ಹಿನ್ನಲೆ ಏನು?

BOMB BLAST ಪ್ರಕರಣ: ಡ್ರೋನ್ ಪ್ರತಾಪ್‌ Arrest! ಪ್ರಕರಣದ ಹಿನ್ನಲೆ ಏನು?

0
BOMB BLAST ಪ್ರಕರಣ: ಡ್ರೋನ್ ಪ್ರತಾಪ್‌ Arrest! ಪ್ರಕರಣದ ಹಿನ್ನಲೆ ಏನು?

ತುಮಕೂರು, ಡಿಸೆಂಬರ್ 13: ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು.

ಈ ಸಂಬಂಧ ಗುರುವಾರ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್‌ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.

ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದಾರೆ.

LEAVE A REPLY

Please enter your comment!
Please enter your name here