spot_img
Thursday, April 17, 2025
spot_imgspot_imgspot_imgspot_img
spot_img

Top 5 This Week

spot_img

Related Posts

BSY ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೋಕ್ಸೋ ಪ್ರಕರಣದ ರದ್ದತಿಗೆ ಅರ್ಜಿ; ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ!

ಬೆಂಗಳೂರು, ನವೆಂಬರ್ 28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮಧ್ಯಾಹ್ನ 2.30ಕ್ಕೆ ನಿಗದಿಪಡಿಸಿದೆ.

ತಮ್ಮ ವಿರುದ್ಧ ಸದಾಶಿವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪೋಕ್ಸೋ ಕಾಯಿದೆ ಸೆಕ್ಷನ್ 35ರಲ್ಲಿ ತಿಳಿಸಿರುವಂತೆ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಆದರೆ, ಕಾಗ್ನಿಜೆನ್ಸ್ ಪಡೆದುಕೊಂಡು ಹೀಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ. ವಿ. ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ತಿಳಿಸಿದರು.

कोई जवाब दें

कृपया अपनी टिप्पणी दर्ज करें!
कृपया अपना नाम यहाँ दर्ज करें

Popular Articles