ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.